ತುಮಕೂರು- ದಿವ್ಯಾಂಗ ಮೈತ್ರಿ ಸ್ಪೋರ್ಟ್ಸ್ ಅಕಾಡೆಮಿ ಮತ್ತು ತುಮಕೂರು ಡಿಸ್ಟ್ರಿಕ್ಟ್ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ವ್ಹೀಲ್‌ಚೇರ್ ಕ್ರಿಕೆಟ್ ತರಬೇತಿ ಶಿಬಿರವನ್ನು ಮೇ.11 ಮತ್ತು 12 ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.
ತರಬೇತಿ ಶಿಬಿರದಲ್ಲಿ ರಾಜ್ಯಾದ್ಯಂತ ವಿಶೇಷ ಚೇತನರು ಭಾಗವಹಿಸಲಿದ್ದಾರೆ. ವಿಶೇಷ ಚೇತನರನ್ನು ಗುರುತಿಸಿ ಮತ್ತು ಕ್ರೀಡೆಯಲ್ಲಿ ತೊಡಗಿಸಿಕೊಂಡು ಅವರ ದೈಹಿಕ ಸಾಮರ್ಥ್ಯ ಹೆಚ್ಚಿಸುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ತುಮಕೂರು ಡಿಸ್ಟ್ರಿಕ್ಟ್ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.
ಎರಡು ದಿನಗಳ ಕ್ರಿಕೆಟ್ ತರಬೇತಿ ಶಿಬಿರಕ್ಕೆ ಹತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಬೆಂಬಲಿಸಿವೆ. ಮೇ.12 ರಂದು ಸಂಜೆ 4 ಗಂಟೆಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.