ಜಿಲ್ಲೆ

ಯುವನಿಧಿಗೆ ಸ್ವಯಂ ಘೋಷಣೆ ಸಲ್ಲಿಸಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ರಾಜ್ಯದ ಯುವನಿಧಿ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25ರೊಳಗೆ ತಾನು ನಿರುದ್ಯೋಗಿ ಎಂದು, ವ್ಯಾಸಂಗ ಮುಂದುವರೆಸುತ್ತಿಲ್ಲ ಎಂದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿದೆ.


ಸೇವಾ ಸಿಂಧು ಪೋರ್ಟಲ್​ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ದೂ.0816- 2278488 ಸಂಪರ್ಕಿಸಿ.