ಜಿಲ್ಲೆ

ಸಾರ್ವಜನಿಕರ ಕುಂದು ಕೊರತೆಗೆ ಸಹಾಯವಾಣಿ ಆರಂಭಿಸಿದ ತುಮಕೂರು ಜಿಪಂ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಸಾರ್ವಜನಿಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ವಿವಿಧ ಯೋಜನೆಗಳ ಮಾಹಿತಿ ಪಡೆಯಲು ಮತ್ತು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತುಮಕೂರು ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕ ಕುಂದು ಕೊರತೆ ಸಹಾಯವಾಣಿ ಆರಂಭಿಸಲಾಗಿದೆ.
ತೆರೆಯಲಾಗಿದೆ.

ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 0816-2005188 ಮತ್ತು ವಾಟ್ಸ್ ಆಪ್ ಸಂಖ್ಯೆ: 9741251873ಕ್ಕೆ ಕರೆ ಮಾಡುವ ಮೂಲಕ ಅಥವಾ ಸಂದೇಶ ಕಳುಹಿಸುವ ಮೂಲಕ ತಮ್ಮ ಸಮಸ್ಯೆಗಳನ್ನು ಸಲ್ಲಿಸಬಹುದು.

ಸಹಾಯವಾಣಿ ರಜಾ ದಿನ ಹೊರತುಪಡಿಸಿ ಬೆಳಗ್ಗೆ 8 ರಿಂದ ರಾತ್ರಿ 9ರ ವರೆಗೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಶುದ್ಧ ಕುಡಿಯುವ ನೀರು, ಗ್ರಾಮಗಳ ಸ್ವಚ್ಛತೆ ಸೇರಿದಂತೆ ನರೇಗಾ, ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ವಸತಿ ಸೇರಿದಂತೆ ತಮ್ಮ ಕುಂದು ಕೊರತೆಗಳನ್ನು ದೂರವಾಣಿ ಮುಖೇನ ಸಲ್ಲಿಸಬಹುದು.