Ambedkar's philosophy and policy 
ತುಮಕೂರು

ಅಂಬೇಡ್ಕರ್​ ತತ್ವಾದರ್ಶ ಪಾಲಿಸಿ

ತುಮಕೂರು ಡೆಸ್ಕ್
ಬರಗೂರು: ತಮ್ಮಲ್ಲಿ ಎಷ್ಟೇ ಅಡವು, ಆಸ್ತಿ, ಬೆಳ್ಳಿ ಬಂಗಾರವಿದ್ದರೂ ಶಿಕ್ಷಣಕ್ಕಿಂತ ಹೆಚ್ಚು ಬೆಲೆಬಾಳುವ ಅಮೂಲ್ಯವಾದುದು ಮತ್ತೊಂದಿಲ್ಲ ಎಂದು ಕೋಡಿಹಳ್ಳಿ ಆದಿಜಾಂಬವ ಬೃಹನ್​ ಮಠದ ಶ್ರೀ ಗುರುಪ್ರಕಾಶಮುನಿ ಸ್ವಾಮೀಜಿ ಹೇಳಿದರು.
ಶಿರಾ ತಾಲೂಕು ಕುರುಬರರಾಮನಹಳ್ಳಿಯ ಡಾ.ಬಿ.ಆರ್​.ಅಂಬೇಡ್ಕರ್​ ಯುವಕ ಸಂಘದಿಂದ ಭಾನುವಾರ ಆಯೋಜಿಸಿದ್ದ 135ನೇ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿಯಲ್ಲಿ ಮಾತನಾಡಿ, ಅಂಬೇಡ್ಕರ್​ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ದುಶ್ಚಟಗಳಿಗೆ ಬಲಿಯಾಗುವುದು ಬೇಡ. ಶೈಕ್ಷಣಿಕವಾಗಿ ಶಿಕ್ಷಣವನ್ನು ಮೈಗೂಡಿಸಿಕೊಂಡು ಉನ್ನತ ಸ್ಥಾನಗಳಿಗೆ ತಲುಪಿದಾಗ ತಮ್ಮ ಜೀವನ ಸಾರ್ಥಕವಾಗುತ್ತದೆ ಎಂದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭಗಳನ್ನು ಹೊತ್ತು ಮಹಿಳೆಯರು ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಅಂಬೇಡ್ಕರ್​ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಪಂ ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು.