ತುಮಕೂರಿನ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್​.ಬಿ.ಪ್ರದಿಪ್​ ಕುಮಾರ್​ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾದರು.  
ತುಮಕೂರು

ಪ್ರದಿಪ್​ ನಿವಾಸಕ್ಕೆ ಬಿವೈವಿ ಭೇಟಿ

ಪ್ರಮುಖ ಮುಖ್ಯಾಂಶಗಳು

  • ಪದವೀಧರ ಕ್ಷೇತ್ರದ ಚುನಾವಣೆ
  • ಅಸಮಾಧಾನ ಶಮನಕ್ಕೆ ಯತ್ನ
  • ಪಕ್ಷ ಸಂಘಟನೆಗೆ ಶ್ರಮಿಸಿ

ತುಮಕೂರು: ಮುಂಬರುವ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್​ಗೆ ನಡೆಯಲಿರುವ ಚುನಾವಣೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ನಗರದ ವಿದ್ಯಾವಾಹಿನಿ ಶಿಕ್ಷಣಸಂಸ್ಥೆ ಕಾರ್ಯದರ್ಶಿ ಎನ್​.ಬಿ.ಪ್ರದಿಪ್​ ಕುಮಾರ್​ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.

ಈ ವೇಳೆ ಮಾತನಾಡಿದ ವಿಜಯೇಂದ್ರ, ಸಮಾಜದ ಹಿತದೃಷ್ಟಿಯಿಂದ ಹಾಗೂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ರಾಜ್ಯದಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಗ್ರಾಮಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿ, ಸಂಘಟನೆಯನ್ನು ಸದೃಢಗೊಳಿಸುವುದು ಪ್ರಮುಖಆದ್ಯತೆಯಾಗಿದೆ. ಮುಂಬರುವ ದಿನಗಳಲ್ಲಿ ಕಾರ್ಯಕರ್ತರೊಂದಿಗೆ ಹೆಚ್ಚಿನ ಸಂವಾದ ನಡೆಸಿ, ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷದ ಬಲವಾಗಿದ್ದು, ಅವರ ಸಲಹೆ ಸೂಚನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್​, ಎಂಎಲ್ಸಿ ರುಕೌಟಿಲ್ಯ, ಜಿಲ್ಲಾಧ್ಯಕ್ಷ ಎಚ್​.ಎಸ್​.ರವಿಶಂಕರ್​, ಮಾಜಿ ಉಪಮೇಯರ್​ ನರಸಿಂಹಮೂರ್ತಿ, ರವೀಶ್​ ಜಹಾಂಗೀರ್​, ಟಿ.ಆರ್​.ಸದಾಶಿವಯ್ಯ ಮತ್ತಿತರರು ಇದ್ದರು.