ತುರುವೇಕೆರೆ ತಾಲೂಕಿನ ಬ್ಯಾಲಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಯೋಜನೆಯಡಿ ಹೂಳೆತ್ತುವ ಕಾರ್ಯದಲ್ಲಿ ಕೆರೆ ಸಮಿತಿಯ ಅಧ್ಯಕ್ಷ ಸತೀಶ್, ತುರುವೇಕೆರೆ ಗ್ರಾವಾಂತರ ಯೋಜನಾಧಿಕಾರಿ ಶೇಖರ್ ಶೆಟ್ಟಿ, ಗೋವರ್ಧನ್, ವಲಯ ಮೇಲ್ವಿಚಾರಕ ಶ್ರೀಕಾಂತ್, ಒಕ್ಕೂಟದ ಅಧ್ಯಕ್ಷೆ ಭಾರತಿ, ಸೇವಾ ಪ್ರತಿನಿಧಿ ರಂಜಿತಾ ಇದ್ದರು. 
ತುಮಕೂರು

ಅಂತರ್ಜಲ ವೃದ್ಧಿಗೆ ಕೆರೆಗಳ ಹೂಳೆತ್ತುವುದು ಅಗತ್ಯ

ತುರುವೇಕೆರೆ :

ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಕೆರೆಗಳ ಅಭಿವೃದ್ಧಿ ವಾಡಲಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.

ತಾಲೂಕಿನ ಬ್ಯಾಲಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಯೋಜನೆಯಡಿ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ವಾತನಾಡಿ, ಕಳೆದ 10 ವರ್ಷಗಳಿಂದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ರಾಜ್ಯದ ಸುವಾರು 1000ಕ್ಕೂ ಹೆಚ್ಚು ಕೆರೆಗಳ ಹೂಳೆತ್ತಲಾಗಿದೆ. ಇದರಿಂದ ನಾಡಿನ ಲಕ್ಷಾಂತರ ಜನರಿಗೆ, ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಿದೆ. ಕೆರೆ ಹೂಳೆತ್ತಿರುವುದರಿಂದ ಅಂತರ್ಜಲದ ಮಟ್ಟ ಹೆಚ್ಚುತ್ತದೆ. ಆದ್ದರಿಂದ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದರು.

ಗ್ರಾವಾಭಿವೃದ್ಧಿ ಯೋಜನೆಯ ಮೂಲಕ ಹಾಲಿನ ಡೇರಿಯ ಕಟ್ಟಡ ರಚನೆಗೆ, ಶಾಲೆಗಳಿಗೆ ಬೆಂಚು, ಡೆಸ್ಕ್, ಶಾಲೆಗೆ ಜ್ಞಾನ ದೀಪ ಶಿಕ್ಷಕರ ನೇಮಕಾತಿ, ಸ್ವಸಹಾಯ ಸಂದ ಸದಸ್ಯರ ಮಕ್ಕಳ ವೃತ್ತಿಪರ ಶಿಕ್ಷಣಕ್ಕೆ ಸುಜ್ಞಾನ ನಿಧಿ, ಶಿಷ್ಯವೇತನ ನೀಡಲಾಗುತ್ತಿದೆ. ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಗತಿಕರ ಸದಸ್ಯರಿಗೆ ಪ್ರತಿ ತಿಂಗಳು ವಾಶಾಸನ ನೀಡಲಾಗುತ್ತಿದೆ. ಸೂರು ಇಲ್ಲದ ಸದಸ್ಯರಿಗೆ ಮನೆ ನಿರ್ವಾಣ ವಾಡಿ ಕೊಡಲಾಗುತ್ತಿದೆ ಎಂದು ಹೇಳಿದರು.