ಶಿರಾ: ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಬಾಳಾಪುರ ಗೇಟ್ ಬಳಿ ಸೋಮವಾರ ಸಂಜೆ ರಸ್ತೆ ಅಪಘಾತದಲ್ಲಿ ಹುಳಿಯಾರು ಗ್ರಾಮದ ವಾಸಿ ಆರ್.ಗುರುಮೂರ್ತಿ (45) ಎಂಬುವವರು ಮೃತಪಟ್ಟಿದ್ದಾರೆ.
ಚಿಕ್ಕನಹಳ್ಳಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಅಧೀಕ್ಷಕರಾಗಿದ್ದರು. ಶಿರಾ ಕಡೆಯಿಂದ ಹುಳಿಯಾರ್ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಈ ಸಂಭವಿಸಿದೆ. ಶಿರಾ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.