ತುಮಕೂರಿನಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಲಾನುಭವಿಗಳಿಗೆ ಚೆಕ್ ಅನ್ನು ಸಾಂಕೇತಿಕವಾಗಿ ಸಚಿವ ಪರಮೇಶ್ವರ ವಿತರಿಸಿದರು. ಎಚ್.ಎಂ.ರೇವಣ್ಣ, ಎಸ್.ಆರ್.ಪಾಟೀಲ,ಚಂದ್ರಶೇಖರ್ಗೌಡ, ಶುಭಕಲ್ಯಾಣ್, ಬಿ.ವಿ.ಅಶ್ವಿಜ ಮತ್ತಿತರರು ಇದ್ದರು.
- ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಾಗಾರ
- ಮೃತಪಟ್ಟಿರುವ 1.44 ಲಕ್ಷ ಗೃಹಲಕ್ಷ್ಮೀಯರ ಖಾತೆ 79 ಕೋಟಿ
- ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ
ತುಮಕೂರು: ರಾಜ್ಯದಲ್ಲಿ ವಿವಿಧ ಕಾರಣದಿಂದ ಮೃತಪಟ್ಟಿರುವ 1.44ಲಕ್ಷ ಗೃಹಲಕ್ಷ್ಮೀ ಲಾನುಭವಿಗಳ ಖಾತೆಗೆ ಮರಣ ನಂತರವೂ 79ಕೋಟಿ ರೂ. ಹಣ ವರ್ಗಾವಣೆಯಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ನಗರದ ಅಮಾನಿಕೆರೆ ಗಾಜಿನ ಮನೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ 4228 ಮೃತ ಲಾನುಭವಿಗಳ ಖಾತೆಗೆ ಬರೋಬ್ಬರಿ 5 ಕೋಟಿ ರೂ., ವರ್ಗಾವಣೆಯಾಗಿದ್ದು ಅದನ್ನು ವಸೂಲಿ ಮಾಡುವ ಹೊಣೆ ಜಿಲ್ಲಾಡಳಿತ ನಿಭಾಯಿಸಬೇಕು ಎಂದರು.
ಗ್ಯಾರಂಟಿ ನಿಲ್ಲಿಸುವುದಿಲ್ಲ: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳ ಜತೆಗೆ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶೀಘ್ರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀಮಾರ್ನಿಸಲಾಗಿದೆ. ಯುವಕರ ಪರವಾಗಿ ಯೋಜನೆಗಳನ್ನು ಕೊಟ್ಟಿದ್ದೇವೆ, ಉದ್ಯೋಗ ಕೊಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧ್ಯಕ್ಷ ಚಂದ್ರಶೇಖರ್ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ರಾಜ್, ಜಾಗೃತ ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಡಾ.ಎಚ್.ವಿ.ವಾಸು, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಒ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.