ತುಮಕೂರಿನಲ್ಲಿ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಗಳ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಅರ್ನಿಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟ ಹಿನ್ನೆಲೆ ಜಿಪಂ ಸಿಇಒ ಬಿ.ವಿ.ಅಶ್ವಿಜಗೆ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನಿಯೋಗವು ಮನವಿ ಸಲ್ಲಿಸಿತು. 
ತುಮಕೂರು

21 ರಿಂದ ಪಿಡಿಒಗಳ ಅಸಹಕಾರ ಚಳವಳಿ

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ
  • ನ್ಯಾಯಸಮ್ಮತ ಬೇಡಿಕೆಗೆ ಆಗ್ರಹ
  • ಜಿಪಂ ಸಿಇಒಗೆ ಜಿಲ್ಲಾ ಶಾಖೆ ನಿಯೋಗ ಮನವಿ
ತುಮಕೂರು-: ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಗಳ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ.21 ರಿಂದ ರಾಜ್ಯವ್ಯಾಪಿ ಅರ್ನಿಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಈ ಹೋರಾಟಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಹಕಾರ ನೀಡವಂತೆ ಸಂಘದ ಜಿಲ್ಲಾ ಶಾಖೆ ವತಿಯಿಂದ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ವಿ.ಆರ್​.ಸುಬ್ಬರಾಜ ಅರಸ್​, ಖಜಾಂಚಿ ಎಸ್​.ಎಸ್​.ಮಂಜುನಾಥ್​, ರಾಜ್ಯ ಪರಿಷತ್​ ಸದಸ್ಯ ಡಿ.ವಿ.ವೆಂಕಟೇಶ್​ ಹಾಗೂ ಉಪಾಧ್ಯಕ್ಷ ತೇಜಸ್ವಿ ಅವರನ್ನೊಳಗೊಂಡ ನಿಯೋಗವು ನಗರದ ಜಿಪಂ ಕಚೇರಿಯಲ್ಲಿ ಜಿಪಂ ಸಿಇಒ ಬಿ.ವಿ.ಅಶ್ವಿಜ ಮನವಿ ಸಲ್ಲಿಸಲಾಯಿತು.
ಸಂಘವು ಸರ್ಕಾರದ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು ಇದುವರೆಗೂ ಸಮರ್ಪಕವಾಗಿ ಈಡೇರದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ವಿಸತವಾಗಿ ಚರ್ಚಿಸಲಾಗಿದೆ. ಈ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ರ್ನಿಣಯದಂತೆ, ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ 21 ರಿಂದ ರಾಜ್ಯವ್ಯಾಪಿ ಅರ್ನಿದಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಹಮ್ಮಿಕೊಳ್ಳಲು ತೀಮಾರ್ನಿಸಲಾಗಿದೆ ಎಂದು ವಿ.ಆರ್​.ಸುಬ್ಬರಾಜ ಅರಸ್​ ತಿಳಿಸಿದ್ದಾರೆ.
ಪಿಡಿಒಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳುವುದರೊಂದಿಗೆ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಶಾಂತಿಯುತ ಹೋರಾಟಕ್ಕೆ ಅಗತ್ಯ ಸಹಕಾರ ನೀಡುವಂತೆ ಸಿಇಒಗೆ ಕೋರಿದರು.
ಗ್ರಾಪಂಗಳಿಗೆ ಬಾಕಿಯಿರುವ 15ನೇ ಹಣಕಾಸು ಆಯೋಗದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಗ್ರಾಮ ಪಂಚಾಯಿತಿಗಳ ಸುಗಮ ಆಡಳಿತ ಮತ್ತು ಮೂಲ ಸೌಕರ್ಯ ನಿರ್ವಹಣೆಗೆ ಅಗತ್ಯ ಆರ್ಥಿಕ ನೆರವು ಒದಗಿಸಬೇಕು. ಗ್ರಾಪಂಗಳ ಕುಡಿಯುವ ನೀರು ಮತ್ತು ನೈರ್ಮಲ್ಯ ಸೇವೆಗಳಿಗೆ ರಾಜ್ಯ ಬಜೆಟ್​ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು. ಜನಸಂಖ್ಯೆ ಮತ್ತು ವ್ಯಾಪ್ತಿಯ ಆಧಾರದ ಮೇಲೆ ಪ್ರತಿ ಗ್ರಾಮ ಪಂಚಾಯಿತಿಗೆ ನೈರ್ಮಲ್ಯ ಕಾರ್ಯಗಳಿಗಾಗಿ ವಾರ್ಷಿಕ 10 ಲಕ್ಷದಿಂದ 15 ಲಕ್ಷದವರೆಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮತ್ತು ನಿರ್ವಹಣೆಗಾಗಿ 25 ಲಕ್ಷದಿಂದ 35 ಲಕ್ಷದವರೆಗೆ ಪ್ರತ್ಯೇಕ ಅನುದಾನ ಒದಗಿಸಬೇಕು. ಈ ಕುರಿತು ವಿಸ್ತೃತ ವರದಿ ಸಿದ್ಧಪಡಿಸಿ, ಪೂರಕ ಬಜೆಟ್​ ಮೂಲಕ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಹೋರಾಟದ ಮೊದಲ 3 ದಿನಗಳಾದ ಸೋಮವಾರ, ಮಂಗಳವಾರ ಮತ್ತು ಬುಧವಾರ ಆಯಾ ಜಿಪಂ ಕಚೇರಿಗಳ ಮುಂಭಾಗದಲ್ಲಿ ಜಿಲ್ಲಾಮಟ್ಟದ ಪ್ರತಿಭಟನೆ ನಡೆಸಲಾಗುವುದು. ನಂತರ ರಾಜ್ಯ ಸಂಘದ ನಿರ್ದೇಶನದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ರಾಜ್ಯಮಟ್ಟದ ಅರ್ನಿಧಿಷ್ಟಾವಧಿ ಹೋರಾಟವನ್ನು ಮುಂದುವರೆಸಲಾಗುವುದು ಎಂದಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ತೀರ್ಥ, ಸಂಘಟನಾ ಕಾರ್ಯದರ್ಶಿ ಎಸ್​.ಎಲ್​.ಚಂದ್ರಹಾಸ , ಸಂಘಟನಾ ಕಾರ್ಯದರ್ಶಿ ಎ. ಕೋಕಿಲ, ಕ್ರೀಡಾ ಕಾರ್ಯದರ್ಶಿ ಎನ್​.ಸುನೀಲ್​ಕುಮಾರ್​, ಸಾಂಸತಿಕ ಕಾರ್ಯದರ್ಶಿ ವಿಜಯಲಕ್ಷಿ$್ಮ ಆರ್​. ಪಾಟೀಲ್​, ಪ್ರಧಾನ ಕಾರ್ಯದರ್ಶಿ ಜಿ.ತೇಜೇಶ್​, ಕಾರ್ಯಾಧ್ಯಕ್ಷ ಜಿ.ಲೋಕೇಶ್​ ಮತ್ತಿತರರು ಇದ್ದರು.