Give Jayachandra a ministerial position.
ಶಿರಾ: ಹಲವು ಬಾರಿ ಸಚಿವರಾಗಿ ಸುಮಾರು 50 ವರ್ಷಗಳ ಕಾಲ ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಸಿಎಂ ಡಿಕೆಶಿ ಅವರ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಯಚಂದ್ರ ಅವರು ಕಾನೂನು, ಕೃಷಿ, ಸಣ್ಣ ನೀರಾವರಿ, ಉನ್ನತ ಶಿಕ್ಷಣ ಸಚಿವರಾಗಿ ರಾಜ್ಯಕ್ಕೆ ಅಮೂಲಾಗ್ರ ಸೇವೆ ನೀಡಿದ್ದಾರೆ. ಕಳಂಕ ರಹಿತ ನಾಯಕರು. ಹಾಗಾಗಿ ಎರಡನೇ ಪಟ್ಟಿಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಮನವಿ ಮಾಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಜಮೀರ್ ಅಹಮದ್ ಖಾನ್ ಅವರು ವಸತಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ದೀನ ದಲಿತರಿಗೆ, ಅಲ್ಪಸಂಖ್ಯಾತರಿಗೆ ಬಡವರಿಗೆ ಸಾವಿರಾರು ವಸತಿ ಕಲ್ಪಿಸಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ದಲಿತ ಅಲ್ಪಸಂಖ್ಯಾತರ ಪರವಾಗಿದ್ದಾರೆ. ಅವರಿಗೂ ಸಹ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಣಿಕಂಠ ಮಾತನಾಡಿದರು. ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಅಂಜನ್ ಕುಮಾರ್, ಗ್ರಾಮಾಂತರ ಯುವ ಕಾಂಗ್ರೆಸ್ ಹೇಮಂತ್ ಗೌಡ, ಎನ್ಎಸ್ಯುಐ ಅಧ್ಯಕ್ಷ ರಂಗನಾಥ್ ಇದ್ದರು.