- ಒಳ ಮೀಸಲಾತಿಯಲ್ಲಿ ದಲಿತರಿಗೆ ಅನ್ಯಾಯ
ಒಳ ಮೀಸಲಾತಿಯಲ್ಲಿ ದಲಿತರಿಗೆ ಅನ್ಯಾಯ
* ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಗೋವಿಂದ ಕಾರಜೋಳ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಕೇವಲ ಗ್ಯಾರಂಟಿ ವಿಚಾರ ಹೇಳುತ್ತಿದ್ದಾರೆ. ಸರಿಯಾಗಿ ಒಳ ಮೀಸಲಾತಿ ಜಾರಿ ಮಾಡದೇ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲಾಗಿತ್ತು. ಅದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಅವರು ಮೀಸಲಾತಿ ಹೆಚ್ಚಳದ ಬಗ್ಗೆ ಕೋರ್ಟ್ನಲ್ಲಿ ಕೇಸ್ ಹಾಕಿಸಿ, ಅದಕ್ಕೆ ಸರ್ಕಾರದಿಂದ ವಾದ ಮಾಡದೆ ಮೊದಲಿದ್ದಂತೆ ಮೀಸಲಾತಿ ಆಗಲು ಕಾರಣರಾಗಿದ್ದಾರೆ. ಕಾಂಗ್ರೆಸ್ನವರು ಯಾವತ್ತೂ ದಲಿತರ ಪರ ಇಲ್ಲ. ಬಿಜೆಪಿ ಸರ್ಕಾರ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಮೀಸಲಾತಿ ಮಾಡಿದೆ. ಆದರೆ ಈ ಸರ್ಕಾರ ಎಸ್ಸಿ ಮೀಸಲಾತಿಯಲ್ಲಿ ಗೊಂದಲ ಸೃಷ್ಟಿ ಮಾಡಿದೆ. ಸದಾಶಿವ ಆಯೋಗ, ನಾಗಮೋಹನ್ ದಾಸ್, ಮಾಧುಸ್ವಾಮಿ ಅವರ ಶಿಫಾರಸು ಯಾವುದನ್ನು ಪರಿಗಣಿಸಿಲ್ಲ. ಕೇವಲ ಅಣ್ಣ&ತಮ್ಮಂದಿರು ಆಸ್ತಿ ಭಾಗ ಮಾಡಿಕೊಂಡಂತೆ ಮೀಸಲಾತಿ ಹಂಚಿಕೆ ಮಾಡಿದ್ದಾರೆ. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಮೀಸಲಾತಿ ವರ್ಗೀಕರಣವಾಗಿಲ್ಲ ಎಂದರು.
ಶೇ.80 ಬಂಗಾರವನ್ನು ಭಾರತ ಆಮದು ಮಾಡಿಕೊಳ್ಳುತ್ತದೆ. ಈ ಹಿಂದೆ 1964&65ರಲ್ಲಿ ಲಾಲ್ ಬಹದ್ದೂರ್ ಶಾಸ್ತಿ ಅವರು ಆಹಾರದ ಸಮಸ್ಯೆ ಉಂಟಾದಾಗ ವಾರದಲ್ಲಿ ಒಂದು ದಿನ ಊಟ ಬಿಡುವಂತೆ ಕರೆ ಕೊಟ್ಟಿದರು. ಅಂದು ಜನತೆ ಅದನ್ನು ಪಾಲಿಸಿದರು. ಹಿಂದೆ ಕಾಂಗ್ರೆಸ್ ಸರ್ಕಾರ ಬಂಗಾರ ಖರೀದಿ ಮಾಡಬೇಡಿ ಎಂದು ಕರೆ ಕೊಟ್ಟಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದನ್ನು ಜನರ ಮುಂದೆ ತಪ್ಪಾಗಿ ಬಿಂಬಿಸಿರುವುದನ್ನು ಖಂಡಿಸುತ್ತೇನೆ ಎಂದರು.
ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಮಧುಗಿರಿ ವಿಭಾಗದ ಜಿಲ್ಲಾ ಬಿಜೆಪಿ ಮಹಿಳಾ ಟಕದ ಅಧ್ಯೆ ಉಮಾ ವಿಜಯರಾಜ್, ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ಬಿಜೆಪಿ ಎಸ್ಟಿ ಮೋರ್ಚಾ ಅಧ್ಯ ತೇಜೇಶ್ವರ್, ಪಿಎಲ್ಡಿ ಬ್ಯಾಂಕ್ ಉಪಾಧ್ಯ ಅಜ್ಜಣ್ಣ, ಗ್ರಾಪಂ ಮಾಜಿ ಸದಸ್ಯರಾದ ಶಿವು ಸ್ನೇಯಪ್ರಿಯ, ಉಮೇಶ್ ಇತರರು ಇದ್ದರು.
ಕಾಂಗ್ರೆಸ್ನಿಂದ ಅಪಪ್ರಚಾರ: ಇರಾನ್, ಇಸ್ರೇಲ್, ಅಮೆರಿಕದ ನಡುವೆ ಯುದ್ಧ ಪ್ರಾರಂಭವಾದ ಮೇಲೆ ಡಾಲರ್ ಮೌಲ್ಯ ಹೆಚ್ಚಾಗಿದೆ.ಪೆಟ್ರೋಲ್, ಡೀಸೆಲ್, ಎಲ್ಪಿಜಿ ಸಮಸ್ಯೆ ಉಂಟಾಗಿದೆ. ಆದರೂ ಇದುವರೆಗೂ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿದೆ. ಮುಂದಿನ ದಿನಗಳಲ್ಲಿ ತೀವ್ರ ತೊಂದರೆಯಾಗುವುದನ್ನು ತಡೆಯಲು ಮೋದಿ ಅವರು ಒಂದು ವರ್ಷದವರೆಗೆ ಪೆಟ್ರೋಲ್ ಕಡಿಮೆ ಬಳಸಿ, ಬಂಗಾರ ಖರೀದಿ ಮಾಡಬೇಡಿ ಎಂದು ಕರೆ ಕೊಟ್ಟಿದ್ದಾರೆ. ಆದರೆ ಲಜ್ಜಗೆಟ್ಟ ಕಾಂಗ್ರೆಸ್ ಈ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.