ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾದರು.
- ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶನ ಕೊಡಿ
- ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ವಿ.ಸೋಮಣ್ಣ ಮನವಿ
- ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿ ಸಾಧ್ಯ
ರಾಜ್ಯದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಭಾರತದ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾರನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.
ದೆಹಲಿಯಲ್ಲಿ ಗುರುವಾರ ಗೃಹಸಚಿವಾಲಯದ ಕಚೇರಿಯಲ್ಲಿ ಅಮಿತ್ ಷಾರನ್ನು ಭೇಟಿಯಾದ ಸೋಮಣ್ಣ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿದರಲ್ಲದೆ, ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆ ಮಾಡುವುದರಿಂದ ಅತ್ಯಂತ ಹಿಂದುಳಿದಿರುವ ಈ ಸಮುದಾಯಕ್ಕೆ ಸಂವಿಧಾನದ ಆಶಯದಂತೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿ ಸಾಧ್ಯವಾಗಲಿದೆ ಎನ್ನುವ ಬಗ್ಗೆ ಗಮನಸೆಳೆದರು.
ಕಾಡುಗೊಲ್ಲ ಸಮುದಾಯನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮಕೃಗೊಳ್ಳುವ ಕುರಿತು ಮಾರ್ಚ್ 25 ರಂದೇ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸೋಮಣ್ಣ ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಕೇಂದ್ರ ಗೃಹ ಇಲಾಖೆಯು ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿ (ಒಆರ್ಜಿಐ) ಗೆ ವರ್ಗಾಯಿಸಿತ್ತು. ಇದೀಗ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತು ಪರಿಶೀಲಿಸಲು ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿಯು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲತಯಕ್ಕೆ ರವಾನಿಸಿದೆ.
ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವುದರಿಂದ ಅತ್ಯಂತ ಹಿಂದುಳಿದಿರುವ ಈ ಸಮುದಾಯ ಸಾಮಾಜಿಕ, ಶೃಕ್ಷಣಿಕ ಮತ್ತು ಆರ್ಥಿಕ ಉನ್ನತಿಗೆ ಸಹಾಯವಾಗಲಿದೆ. ಕೇಂದ್ರ ಗೃಹಸಚಿವ ಅಮಿತ್ ಷಾಗೆ ಮನವಿ ಮಾಡಿಕೊಂಡು ಸಲ್ಲಿಸಿದ ಪ್ರಸ್ತಾವನೆಯನ್ನು ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಪರಿಶೀಲಿಸಲು ಕಳುಹಿಸಲಾಗಿದೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ