ತುಮಕೂರಿನಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾಅನುಷ್ಠಾನ ಸಮ್ಮೇಳನ ಆಯೋಜಿಸುವ ಹಿನ್ನೆಲೆ ಗಾಜಿನಮನೆಗೆ ತೆರಳಿ ಜಿ.ಚಂದ್ರಶೇಖರಗೌಡ, ಬಿ.ವಿ.ಅಶ್ವಿಜ, ಹನುಮಂತಯ್ಯ, ನರಸೀಯಪ್ಪ ಪರಿಶೀಲಿಸಿದರು.  
ತುಮಕೂರು

27 ರಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮ್ಮೇಳನ

ಜಗನ್ನಾಥ್ ಕಾಳೇನಹಳ್ಳಿ

ಪ್ರಮುಖ ಮುಖ್ಯಾಂಶಗಳು

  • ಗಾಜಿನಮನೆಯಲ್ಲಿ ಕಾರ್ಯಕ್ರಮ
  • ಜಿಲ್ಲಾ ಮಟ್ಟದ ಸಮಿತಿ ಆಯೋಜನೆ
  • 5 ಸಾವಿರ ಫಲಾನುಭವಿಗಳ ಕರೆತರುವ ನಿರೀಕ್ಷೆ
ತುಮಕೂರು: ಜಿಲ್ಲಾಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮ್ಮೇಳನವನ್ನುಫೆ.27 ರಂದು ಆಯೋಜಿಸಲು ನಿರ್ಧರಿಸಲಾಗಿದೆ. ನಗರದ ಅಮಾನಿಕೆರೆ ಆವರಣದ ಗಾಜಿನಮನೆಯಲ್ಲಿ ಈ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಹೇಳಿದರು.
ಜಿಪಂ ಸಭಾಂಗಣದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 20 ಜಿಲ್ಲೆಗಳಲ್ಲಿ ಸಮ್ಮೇಳನ ಆಯೋಜನೆ ಮಾಡಲಾಗಿದೆ. ನಮ್ಮ ಜಿಲ್ಲೆಯಲ್ಲಿ ಹೊರಾಂಗಣ ಸಮ್ಮೇಳನವಾಗಿ ಮಾಡಲಾಗುತ್ತಿದೆ. ಜಿಲ್ಲೆಗಳಲ್ಲಿ ಮಾಡುವ ಈ ಕಾರ್ಯಕ್ರಮಗಳಿಗೆ ರಾಜ್ಯ ಮಟ್ಟದಲ್ಲಿ ಮೊದಲ ಮೂರು ಉತ್ತಮ ಕಾರ್ಯಕ್ರಮಗಳಿಗೆ ಪ್ರಶಸ್ತಿ ನೀಡಲಿದ್ದು, ಈ ಪ್ರಶಸ್ತಿಗೆ ನಮ್ಮ ಜಿಲ್ಲೆಯ ಕಾರ್ಯಕ್ರಮ ಆಯ್ಕೆಯಾಗುವಂತೆ ಕಾರ್ಯಕ್ರಮ ರೂಪಿಸಬೇಕಿದೆ ಎಂದರು.
ಸಭೆಯಲ್ಲಿ ಜಿಪಂ ಸಿಇಒ ಬಿ.ವಿ. ಅಶ್ವಿಜ ಮಾತನಾಡಿ, ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಗಾಜಿನ ಮನೆಯವರೆಗೆ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಲಿದೆ. ಈ ಸಮ್ಮೇಳನಕ್ಕೆ ಸುಮಾರು ನಾಲ್ಕರಿಂದ ಐದು ಸಾವಿರ ಅರ್ಹ ಲಾನುಭಾವಿಗಳನ್ನು ಸೇರಿಸುವ ಗುರಿ ಹೊಂದಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರುಗಳಾದ ಹನುಮಂತಯ್ಯ, ನರಸೀಯಪ್ಪ, ಅಂಬರೀಶ್​, ಸುಬ್ರಹ್ಮಣ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು. ನಂತರ ಗಾಜಿನ ಮನೆ ಆವರಣಕ್ಕೆ ತೆರಳಿದ ತಂಡವು ಸ್ಥಳ ಪರಿಶೀಲಿಸಿತು.