ತುಮಕೂರಿನಲ್ಲಿ ನೀಟ್ ಅಕ್ರಮ ಹಿನ್ನೆಲೆ ಎನ್ಟಿಎ ರದ್ದುಪಡಿಸುವಂತೆ ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
- ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ
- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ
- ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ತುಮಕೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅವಾಂತರ, ಕೋಚಿಂಗ್ ಮಾಫಿಯಾಗಳ ಕೈಗೊಂಬೆ ಎನ್ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಯನ್ನು ರದ್ದುಪಡಿಸಲು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟಿಸಲಾಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಶುಕ್ರವಾರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ವಿಲವಾಗಿರುವ ಕೇಂದ್ರ ಸರ್ಕಾರ ಪ್ರತಿಭಾನಿತ್ವ ವಿದ್ಯಾರ್ಥಿಗಳ ಪ್ರಾಣದ ಜತೆ ಚೆಲ್ಲಾಟವಾಡುತ್ತಿದೆ. ಇದರ ಹೊಣೆ ಹೊತ್ತು ಧರ್ಮೇಂದ್ರ ಪಧಾನ್ ರಾಜೀನಾಮೆ ನೀಡಬೇಕು. ಎನ್ಟಿಎ ಅನ್ನು ರದ್ದುಪಡಿಸುವಂತೆ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, ನೀಟ್ 2026ರ ಪ್ರಶ್ನೆಪತ್ರಿಕೆ ಸೋರಿಕೆ ಯಾವುದೋ ಆಕಸ್ಮಿಕ ಘಟನೆ ಅಲ್ಲ. 2022, 2024 ಹಾಗೂ ಈಗ 2026ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬದಿದ್ದು, ಪರೀಕ್ಷಾ ವ್ಯವಸ್ಥೆಯ ವೈಲ್ಯವನ್ನು ಬಹಿರಂಗಪಡಿಸಿವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಯುತ್ತಿದ್ದರೂ, ಕೇಂದ್ರ ಶಿಕ್ಷಣ ಸಚಿವರಿಂದ ಹಿಡಿದು ಎನ್ಟಿಎ ನ ಯಾರೊಬ್ಬರು ಜವಾಬ್ದಾರಿ ಹೊರಲು ತಯಾರಿಲ್ಲ. ಭ್ರಷ್ಟಾಚಾರ ತಡೆಗಟ್ಟುವ ಹೆಸರಿನಲ್ಲಿ ಜಾರಿಯಾದ ನೀಟ್ ಈಗ ಕೋಟ್ಯಂತರ ರೂಪಾಯಿಗಳ ಕೋಚಿಂಗ್ ಉದ್ಯಮಕ್ಕೆ ದಾರಿ ಮಾಡಿಕೊಟ್ಟಿದೆ. ಶಿಕ್ಷಣ ಹಕ್ಕಾಗಿರದೆ ವ್ಯಾಪಾರದ ವಸ್ತುವಾಗಿ ಮಾರ್ಪಡುತ್ತಿದೆ ಎಂದು ವಾಗ್ಧಾಳಿ ನಡೆಸಿದರು.
ರೈತರ ಆತ್ಮಹತ್ಯೆಗಿಂತಲು ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಾಗಿದೆ. ಈ ವರ್ಷ ನೀಟ್ ಪರೀಕ್ಷೆ ರದ್ದಾದ ನಂತರ ದೇಶಾದ್ಯಂತ 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ವಿದ್ಯಾರ್ಥಿಗಳ ಆತ್ಮಹತ್ಯೆ ಅಲ್ಲ ವ್ಯವಸ್ಥೆ ಮಾಡಿರುವ ಕಗ್ಗೊಲೆ. ನೀಟ್ ಹಗರಣ ತಪ್ಪಿತಸ್ಥರಿಗೆ ನಿರ್ದಯವಾಗಿ ಶಿಕ್ಷೆ ವಿಧಿಸಬೇಕು. ಕೇಂದ್ರ ಶಿಕ್ಷಣಸಚಿವ ಧರ್ಮೇಂದ್ರ ಪ್ರಧಾನ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಒನ ಭರತ್, ಮಹಾಂತೇಶ್, ಸಾಗರ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.