No need to worry about the guarantee schemes. 
ತುಮಕೂರು

ಗ್ಯಾರಂಟಿ ಯೋಜನೆಗಳ ಆತಂಕ ಬೇಡ

ಚಿಕ್ಕನಾಯಕನಹಳ್ಳಿ: -ನೈಜ ಪಲಾನುಭವಿಗಳನ್ನು ಗುರುತಿಸಿ ಹೊಸ ನೀತಿ ನಿಯಮಗಳನ್ನು ರೂಪಿಸುವಲ್ಲಿ ಸರ್ಕಾರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಅದ್ದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಿ.ಡಿ.ಚಂದ್ರ ಶೇಖರ್​ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷಿ$್ಮ, ಯುವನಿಧಿ ಹಾಗೂ ಶಕ್ತಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಹಾಗೂ ಈ ಯೋಜನೆಯಲ್ಲಿ ಯಾರಿಗಾದರೂ ತೊಂದರೆಯಾಗಿದ್ದರೆ ಅಂತಹವರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿಯ ಪಡಿತರ ಅಂಗಡಿಗಳಲ್ಲಿ ನಾಮಪಲಕ, ದಾಸ್ತಾನುವಿವರಗಳನ್ನು ಸರಿಯಾಗಿ ನಮೂದಿಸಬೇಕು. ಈಗಾಗಲೇ ಯಾವ ಕಾರಣಕ್ಕೆ ಪಡಿತರ ಚೀಟಿಗಳು ವಜಾ ಆಗಿವೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಹೇಳಬೇಕು. ಹಾಗೆಯೇ ಶಕ್ತಿ ಯೋಜನೆಯಡಿ ಅರ್ಹರಿಗೆ ಸೌಲಭ್ಯ ಸಿಗಬೇಕು. ವಾಣಿಜ್ಯ ಉದ್ದೇಶಕ್ಕೆ ಶಕ್ತಿ ಯೋಜನೆ ಬಳಕೆಯಾಗದಂತೆ ಎಚ್ಚರವಹಿಸಿ ಎಂದು ತಿಳಿಸಿದರು.
ಸಮಿತಿಯ ಸದಸ್ಯ ನಟರಾಜ್​ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೆಲವು ನ್ಯಾಯಬೆಲೆ ಅಂಗಡಿಗಳಿಗೆ ಹೋಗಿಬರಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ದಸೂಡಿ, ಗಾಣದಾಳು ಭಾಗಗಳಲ್ಲಿ ದೂರದ ಗ್ರಾಮಗಳಲ್ಲೇ ಪಡಿತರ ವಿತರಣೆ ಮಾಡಲು ಕ್ರಮಕೈಗೊಳ್ಳಬೇಕು ಎಂದರು.