ದ್ರೌಪದಿ ಮುರ್ಮು 
ತುಮಕೂರು

ಏ.1ಕ್ಕೆ ಸಿದ್ದಗಂಗೆಗೆ ದ್ರೌಪದಿ ಮುರ್ಮು

ಪ್ರಮುಖ ಮುಖ್ಯಾಂಶಗಳು

  • ಶಿವಕುಮಾರ ಶ್ರೀಗಳ 119ನೇ ಜನ್ಮದಿನ
  • ಗುರುವಂದನಾ ಮಹೋತ್ಸವದಲ್ಲಿ ರಾಷ್ಟ್ರಪತಿಗಳು ಭಾಗಿ
  • ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಸೋಮಣ್ಣ
ತುಮಕೂರು: ತ್ರಿವಿಧ ದಾಸೋಹಿ, ಸಿದ್ದಗಂಗೆಯ ಆರಾಧ್ಯಧೈವ ಲಿಂಗೈಕ್ಯ ಡಾ.ಶಿವಕುಮಾರ ಮಹಾ ಶಿವಯೋಗಿಗಳ 119ನೇ ಜನ್ಮ ಜಯಂತಿ ಹಾಗೂ ಗುರುವಂದನ ಮಹೋತ್ಸವವನ್ನು ಏ.1 ರಂದು ಹಮ್ಮಿಕೊಳ್ಳಲಾಗಿದೆ.
ಶ್ರೀಮಠದಲ್ಲಿ ಅಂದು ಬೆಳಗ್ಗೆ 10.30ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಂದನ ಮಹೋತ್ಸವವನ್ನು ಉದ್ಘಾಟಿಸುವರು. ರಾಜ್ಯಪಾಲ ಥಾವರ್​ ಚಂದ್​ ಗೆಹಲೋತ್​ ಅಧ್ಯಕ್ಷತೆವಹಿಸುವರು. ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಮೈಸೂರಿನ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶ್ರೀಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸುವರು.
ಕೇಂದ್ರ ಸಚಿವ ಪ್ರಲ್ಹಾದಜೋಷಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಭಾರಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​. ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಸಚಿವ ಕೆ.ಎನ್​.ರಾಜಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್​, ಬಿ.ಸುರೇಶಗೌಡ ಉಪಸ್ಥಿತರಿರುವರು.