Save the school by providing quality education.
ಎಂ.ಎನ್.ಕೋಟೆ: ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯ ವರ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಗುರುವಾರ ಡಿಡಿಪಿಐ ರಘುಚಂದ್ರ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣಅಭಿವೃದ್ಧಿಗೆ ಶಿಕ್ಷಕರು ಕೈಜೋಡಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸರ್ಕಾರಿ ಶಾಲೆ ಅಭಿವೃದ್ಧಿಗೆ ಮುಂದಾಗಬೇಕು. ಮಕ್ಕಳ ಕಲಿಕೆಯ ಬಗ್ಗೆ ಆಸಕ್ತಿ ವಹಿಸಬೇಕು. ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದರು.
ಅಡುಗೆ ಕೊಠಡಿ ಹಾಗೂ ಬಿಸಿಯೂಟ ಪರಿಶೀಲಿಸಿದರು. ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಮಕ್ಕಳ ಕಲಿಕೆ ಬಗ್ಗೆ ಗಮನ ಹರಿಸಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ಎದುರಾಗಿದ್ದು, ನಾವೆಲ್ಲರೂ ಕೂಡ ಸರ್ಕಾರಿ ಶಾಲೆಗಳನ್ನು ಉಳಿಸಬೇಕಿದೆ. ಹಾಗಾಗಿ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದರು.