Take advantage of the opportunity to achieve 
ತುಮಕೂರು

ಅವಕಾಶ ಬಳಸಿಕೊಂಡು ಸಾಧನೆ ಮಾಡಿ

ಬುಕ್ಕಾಪಟ್ಟಣ: ಡಾ.ಬಿ.ಆರ್​.ಅಂಬೇಡ್ಕರ್​ ಅವರು ರಚಿಸಿರುವ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೂಯಿಲ್​ ದೊರೆ ಗ್ರಾಪಂ ಪಿಡಿಒ ಕನಕಪ್ಪ ಹನುಮಪ್ಪ ಮೇಲಸಕ್ರಿ ತಿಳಿಸಿದರು.
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಹೂಯಿಲ್​ ದೊರೆ ಗ್ರಾಮದಲ್ಲಿ ಆಯೋಜಿಸಿದ್ದ ಅಂಬೇಡ್ಕರ್​ ಜನ್ಮದಿನಾಚರಣೆಯಲ್ಲಿ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ಹಕ್ಕು, ಕರ್ತವ್ಯ, ಸ್ವಾತಂತ್ರ್ಯ ಹಾಗೂ ವ್ಯಕ್ತಿಗೆ ಬೇಕಾದ ಸೌಲಭ್ಯ ಪಡೆಯಲು ಡಾ.ಬಿ.ಆರ್​.ಅಂಬೇಡ್ಕರ್​ ಅವರು ಸಂವಿಧಾನದ ಮೂಲಕ ಅವಕಾಶ ನೀಡಿದ್ದಾರೆ. ಅದನ್ನು ಬಳಸಿಕೊಂಡು ತಮ್ಮ ಏಳಿಗೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜೈ ಭೀಮ್​ ಯುವಕ ಸಂಘದ ಪದಾಧಿಕಾರಿಗಳು ಸಂವಿಧಾನದ ಪೀಠಿಕೆ ಹಾಗೂ ರಾಷ್ಟ್ರ ಗೀತೆಯನ್ನು ಸಾಮೂಹಿಕವಾಗಿ ಪಠಣ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.