Teach children good manners.
ಕೊರಟಗೆರೆ: ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಾಗದೆ, ಸುಸಂಸತ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು.
ತಾಲೂಕಿನ ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಕುಂಚಶ್ರೀ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ 5ನೇ ಸಂಸ್ಕಾರ ಶಿಬಿರದಲ್ಲಿ ಮಾತನಾಡಿ, ಪರೀೆಯಲ್ಲಿ ಹೆಚ್ಚು ಅಂಕಗಳಿಸದಿದ್ದರೂ ಪರವಾಗಿಲ್ಲ, ಆದರೆ ತಂದೆ&ತಾಯಿಯರು ಹಾಗೂ ಗುರುಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳು ಅಳವಡಿಸಿಕೊಳ್ಳಬೇಕು. ಮೌಲ್ಯಾಧಾರಿತ ಶಿಣವೇ ಜೀವನದಲ್ಲಿ ಹೆಚ್ಚು ಪ್ರಾಮುಖ್ಯತೆ ಹೊಂದಿದೆ. ಪಾಲಕರು ಮಕ್ಕಳನ್ನು ಕೇವಲ ಅಂಕಗಳತ್ತ ಪ್ರೇರೇಪಿಸುತ್ತಿರುವುದು ವಿಷಾದನೀಯ. ಇದರಿಂದ ಮಕ್ಕಳ ಆರೋಗ್ಯ ಹಾಗೂ ಮನಸ್ಥಿತಿಯಲ್ಲಿ ಬದಲಾವಣೆ ಕಾಣಿಸುತ್ತಿದೆ. ಹತ್ತು ದಿನಗಳ ಸಂಸ್ಕಾರ ಶಿಬಿರದಲ್ಲಿ ಮಕ್ಕಳು ನಿಯಮಿತ ಆಹಾರ ಸೇವನೆ, ಒತ್ತಡರಹಿತ ಜೀವನ ಮತ್ತು ಶಿಸ್ತಿನೊಂದಿಗೆ ಉತ್ತಮ ಶಿಬಿರಾರ್ಥಿಗಳಾಗಿ ಬೆಳೆಯಬೇಕು ಎಂದರು.
ಮೇಲುಕೋಟೆಯ ಭಗವತ್ ರಾಮಾನುಜ ಸಂಶೋಧನಾ ಸಂಸ್ಥೆಯ ಕುಲಸಚಿವ ಸಿ.ಕುಮಾರ್ ಮಾತನಾಡಿ, ಹಿಂದೂ ಸಮಾಜದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚುತ್ತಿದ್ದರೂ, ಸಂಸ್ಕಾರವಂತರ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಕುಂಚಿಟಿಗ ಮಹಾಸಂಸ್ಥಾನ ಮಠವು ಸನಾತನ ಪರಂಪರೆಯನ್ನು ಉಳಿಸುವ ಉದ್ದೇಶದಿಂದ ಸಂಸ್ಕಾರ ಶಿಬಿರ ಆಯೋಜಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಮಠದ ದಾನಿಗಳಾದ ಡಾ.ನವೀನ್ ದೇವರಾಜಯ್ಯ ಮಾತನಾಡಿ, ವಿದ್ಯೆ ಕೇವಲ ಾನಕಷ್ಟೇ ಅಲ್ಲ, ಜೀವನೋಪಾಯದ ಮಾರ್ಗವನ್ನೂ ನೀಡುತ್ತದೆ. ವಿದ್ಯಾದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ನಮ್ಮ ದೇಶ, ಭಾಷೆ ಹಾಗೂ ಸಂಸತಿಯನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ಮಕ್ಕಳು ಮೊದಲು ಮನಸ್ಸಿನ ನಿಯಂತ್ರಣ ಕಲಿಯಬೇಕು. ಚಂಚಲತೆಯಿಂದ ದೂರವಾಗಿ ಶಿಬಿರದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು. ವಿದ್ಯೆ ವಿನಯವನ್ನು ಕಲಿಸುತ್ತದೆ ಎಂದು ತಿಳಿಸಿದರು.
ಕುಂಚಿಟಿಗ ಮಹಾಸಂಸ್ಥಾನ ಮಠದ ಮಾಹಿತಿಗಾಗಿ ವೆಬ್ಸೈಟ್ಗೆ ಅಧಿಕೃತವಾಗಿ ಹನುಮಂತನಾಥ ಸ್ವಾಮೀಜಿ ಚಾಲನೆ ನೀಡಿದರು. ಶಿಬಿರದಲ್ಲಿ 500ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.
ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಅನಂತರಾಜು, ಸದ್ವಿದ್ಯಾ ಸಂಸ್ಥಾಪಕ ಶಾಲೆಯ ಆಡಳಿತಾಧಿಕಾರಿ ಡಾ.ನಂಜುಂಡಯ್ಯ, ಸಂಸ್ಕಾರ ಶಿಬಿರದ ಸಂಚಾಲಕ ಡಾ.ಕುಮಾರಸ್ವಾಮಿ ಮತ್ತಿತರರು ಇದ್ದರು. ಇದ್ದರು.