ಚಿಕ್ಕನಾಯಕನಹಳ್ಳಿ ತಾಲೂಕು ಗೋಡೆಕೆರೆ ಬಳಿ ಭೀಕರ ಅಪಘಾತ
- ಗೋಡೆಕೆರೆ ಬಳಿ ಎರಡು ಕಾರು ಮುಖಾಮುಖಿ
- ಮಗು ಸೇರಿ ಸ್ಥಳದಲ್ಲಿಯೇ ನಾಲ್ವರ ಸಾವು
- ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಕೆ.ಬಿ.ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ.
ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ.
ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.