ಸಿಎಂ ಸಿದ್ದರಾಮಯ್ಯ ಆಹ್ವಾನಿಸಿದ ಸಚಿವ ಪರಮೇಶ್ವರ್
- ಸರ್ಕಾರಕ್ಕೆ 3 ವರ್ಷ ತುಂಬಿದ ಸಂಭ್ರಮ
- 19 ರಂದು ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶ
- ಡಿಸಿಎಂ ಡಿ.ಕೆ.ಶಿವಕುಮಾರ್ಗು ಆಹ್ವಾನ
ತುಮಕೂರು: ರಾಜ್ಯ ಸರ್ಕಾರ 3 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮೇ 19 ರಂದು ಹಮ್ಮಿಕೊಂಡಿರುವ ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಶನಿವಾರ ಆಹ್ವಾನಿಸಿದರು.
ಜಿಲ್ಲಾಡಳಿತದ ವತಿಯಿಂದ ಮೇ 19ರಂದು ಬೆಳಗ್ಗೆ 10.30ಕ್ಕೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶ ಹಮ್ಮಿಕೊಂಡಿದ್ದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಡಿಸಿಎಂ ಡಿ.ಕೆ. ಶಿವಕುಮಾರ್, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಸೇರಿದಂತೆ ಸಂಪುಟದ ಹಲವು ಸಚಿವರು ಭಾಗವಹಿಸುವರು. ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ ಹಾಗೂ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.
ಈ ವೇಳೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಇದ್ದರು.
3 ಸಾವಿರ ಬಸ್ಸುಗಳ ವ್ಯವಸ್ಥೆ: ತುಮಕೂರು ನಗರಕ್ಕೆ ಫಲಾನುಭವಿಗಳನ್ನು ಕರೆತರಲು ಸರ್ಕಾರಿ, ಖಾಸಗಿ ಬಸ್ಸುಗಳೂ ಸೇರಿದಂತೆ ಸುಮಾರು 3,000 ಬಸ್ಸುಗಳು ನಗರಕ್ಕೆ ಆಗಮಿಸಲಿದ್ದು, ಫಲಾನುಭವಿಗಳನ್ನು ಕಾರ್ಯಕ್ರಮ ನಡೆಯಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಬಳಿಯೇ ಇಳಿಸಿ ಪಾರ್ಕಿಂಗ್ಗೆ ನಿಗದಿ ಪಡಿಸಿರುವ ಸ್ಥಳದಲ್ಲಿ ಬಸ್ಗಳನ್ನು ನಿಲ್ಲಿಸಲಾಗುವುದು. ಕಾರ್ಯಕ್ರಮದ ನಂತರ ಫಲಾನುಭವಿಗಳನ್ನು ಕರೆದೊಯ್ಯುವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ವಾಹನ ಸಂಚಾರ ಅಥವಾ ವಾಹನಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆಯಾಗಬಹುದು. ಅದಕ್ಕಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಕ್ತ ನಿಲುಗಡೆ ಪ್ರದೇಶ ಗುರುತಿಸಿ ರ್ನಿದಿಷ್ಟ ತಾಲೂಕುಗಳ ವಾಹನಗಳು ರ್ನಿದಿಷ್ಟ ನಿಲುಗಡೆಯಲ್ಲಿಯೇ ನಿಲ್ಲುವಂತೆ ವ್ಯವಸ್ಥೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.