ತುಮಕೂರು:ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೆ.15 ರಿಂದ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ವಾಸವಿರುವ ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾ ಆಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗಳಲ್ಲಿ ನೋಂದಣಿ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋರಿದೆ.
ಸಮೀಕ್ಷೆಗೆ ಬರುವಾಗ ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ಆಧಾರ್ ಲಿಂಕ್ ಆಗಿರುವ ಮೊಬೈಲ್ ತರಬೇಕಿದೆ.