ಬಾದಾಮಿಯಲ್ಲಿ ಆಕಳಿಗೆ ಲಸಿಕೆ ಹಾಕುವ ಮೂಲಕ ಶಾಸಕ ಭೀಮಸೇನ ಚಿಮ್ಮನಕಟ್ಟಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ ಸಬನೀಸ್, ಪುರಸಭೆ ಸದಸ್ಯ ಮಂಜುನಾಥ ಹೊಸಮನಿ ಇತರರಿದ್ದರು 
ಜಿಲ್ಲೆ

ಜಾನುವಾರುಗಳಿಗೆ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ

ತುಮಕೂರು: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಜಿಲ್ಲಾದ್ಯಂತ ಏ.26 ರಿಂದ ಜೂನ್​ 4ರ ವರೆಗೆ ನಡೆಯಲಿದ್ದು, ಜಾನುವಾರುಗಳಿಗಾಗಿ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಗುರಿ ನೀಡಲಾಗಿದೆ.

ಲ್ಲಾಧಿಕಾರಿ ಶುಭ ಕಲ್ಯಾಣ್​ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಭಿಯಾನದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾಲುಬಾಯಿ ರೋಗದ ಲಸಿಕೆ ಜಾನುವಾರುಗಳಿಗೆ ಕಡ್ಡಾಯವಾಗಿ ಹಾಕಿಸುವ ಹಾಗೂ ಲಸಿಕೆ ಉಚಿತವಾಗಿ ನೀಡುವ ಬಗ್ಗೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು ಎಂದರು.

ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ(ತಾಂತ್ರಿಕ) ಡಾ.ನಾಗಮಣಿ ಮಾತನಾಡಿ, ಕಳೆದ ವರ್ಷ ಹಮ್ಮಿಕೊಂಡಿದ್ದ 6ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ 478624 ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ಶೇ.96ರಷ್ಟು ಗುರಿ ಸಾಧಿಸಲಾಗಿತ್ತು ಎಂದರು.

ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 388209 ದನ ಹಾಗೂ 107969 ಎಮ್ಮೆ ಸೇರಿದಂತೆ ಒಟ್ಟು 496278 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಸೇರಿದಂತೆ 566650 ಲಸಿಕೆ ಡೋಸ್​ ದಾಸ್ತಾನು ಮಾಡಲಾಗಿದೆ. ಲಸಿಕೆಯನ್ನು 4 ತಿಂಗಳೊಳಗಿನ ಕರು ಹಾಗೂ ತುಂಬು ಗರ್ಭವಿರುವ ರಾಸುಗಳನ್ನು ಹೊರತುಪಡಿಸಿ ಉಳಿದ ಜಾನುವಾರುಗಳಿಗೆ ನೀಡಲಾಗುವುದು ಎಂದರು.

ಅಭಿಯಾನದಲ್ಲಿ ಲಸಿಕೆ ನೀಡಲು 271 ಇಲಾಖೆ ಲಸಿಕೆದಾರರು ಹಾಗೂ 226 ಇಲಾಖೇತರ ಲಸಿಕೆದಾರರು ಸೇರಿದಂತೆ ಒಟ್ಟು 497 ಲಸಿಕೆದಾರರನ್ನು ಬಳಸಿಕೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್​. ತಿಪ್ಪೇಸ್ವಾಮಿ ಮತ್ತಿತರರ ಅಧಿಕಾರಿಗಳು ಇದ್ದರು.