ಜಿಲ್ಲೆ

ಫೆಲೋಶಿಪ್‌ಗಾಗಿ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಫೆಲೋಶಿಪ್ ಸೌಲಭ್ಯ ನೀಡಲು ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಎಚ್‌ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.


ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ. ಫೆಲೋಶಿಪ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.


ಆಸಕ್ತರು https://dom.karnataka.gov.in/tumakuru ಮೂಲಕ ಅ.31ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ

ದೂ.0816-2273724 ಸಂಪರ್ಕಿಸಿ.