ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಎಸ್ಎಸ್ಎಲ್ಸಿ. ನಂತರದ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಮತ್ತು ಔದ್ಯೋಗಿಕ ಶಿಕ್ಷಣ ವ್ಯಾಸಂಗ ಪಡೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿರುವ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿ ಸೌಲಭ್ಯಕ್ಕಾಗಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕಡೆಯ ದಿನವಾಗಿದೆ. ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಅಥವಾ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ(ಎಂಆರ್ಡಬ್ಲ್ಯೂ) ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್ಡಬ್ಲ್ಯೂ)ಗಳಿಂದ ಪಡೆಯಬಹುದು.