ತುಮಕೂರು: ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡುವ ಮೂಲಕ ಕೃಷಿ ಕ್ಷೇತ್ರಕ್ಕೆ ದೊಡ್ಡ ಆಘಾತ ನೀಡಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಆರೋಪಿಸಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಪ್ರತಿಭಟಿಸಲು ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ 15 ದಿನಗಳಲ್ಲಿ ಬಿಜೆಪಿ ಪಕ್ಷದ ರೈತಮೋರ್ಚಾವತಿಯಿಂದ ವರ್ತಕರು,ರೈತರ ಸಭೆಗಳನ್ನು ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ನಂತರ ಸಂಬAಧಪಟ್ಟ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಿ ಮನವಿ ಸಲ್ಲಿಸಲಾಗುವುದು. ನಂತರ ಬೃಹತ್ ಹೋರಾಟವನ್ನು ರೂಪಿಸಲಾಗುವುದು ಎಂದು ಶಿವಪ್ರಸಾದ್ ಎಚ್ಚರಿಸಿದರು.
4 ಸಾವಿರಕ್ಕು ಕೊಕ್ !: ಕೇಂದ್ರ ಸರ್ಕಾರ ನೀಡುವ ಪಿಎಂ ಕಿಸಾನ್ ಸನ್ಮಾನ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರ ವರ್ಷಕ್ಕೆ 4 ಸಾವಿರ ರೂ.,ಗಳನ್ನು ರೈತರ ಖಾತೆಗೆ ಜಮಾ ಮಾಡುತ್ತಿದ್ದು, ಈ ಯೋಜನೆಯನ್ನು ರದ್ದು ಮಾಡಲಾಗಿದೆ. ಇದರಿಂದ ಕೃಷಿ ಕಾಲದಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ನೆರೆವಾಗುತ್ತಿದ್ದ ಯೋಜನೆ ಸ್ಥಗಿತಗೊಂಡAತಾಗಿದೆ ಎಂದು ಶಿವಪ್ರಸಾದ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್, ರೈತಮೋರ್ಚಾ ಜಿಲ್ಲಾಧ್ಯಕ್ಷ ಸತ್ಯಮಂಗಲ ಜಗದೀಶ್, ಮಾಧ್ಯಮ ಪ್ರಮುಖ್ ಟಿ.ಆರ್.ಸದಾಶಿವಯ್ಯ, ಸಹ ಪ್ರಮುಖ್ ಜೆ.ಜಗದೀಶ್ ಮತ್ತಿತರರು ಹಾಜರಿದ್ದರು.