ತುಮಕೂರು: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ.) ದೃಶ್ಯಕಲೆ ತರಗತಿ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಿವಿಎ ಪದವಿ ಎನ್ಇಪಿ ಪದ್ಧತಿಯಲ್ಲಿ 4 ವರ್ಷದ ಎಂಟು ಸೆಮಿಸ್ಟರ್ಗಳನ್ನು ಒಳಗೊಂಡಿದ್ದು, 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ(ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಅಂತರ್ಜಾಲ ಮೂಲಕವೇ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಮೊ.0821-2438931ಸಂಪರ್ಕಿಸಿ.