ಜಿಲ್ಲೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಇಲಾಖೆಯ ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಭೂಮಾಪನ ಇಲಾಖೆ ಸಹಾಯಕ ಸರ್ವೇಯರ್ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ.

ತುಮಕೂರು ತಾಲೂಕು ಸಹಾಯಕ ಸರ್ವೇಯರ್ ಮಹೇಶ್(35) ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದವರು. ಸರ್ವೇ ಮೇಲ್ವಿಚಾರಕಿ ಕವಿತಾ ಎಂಬುವವರ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಹೇಶ್‌ಗೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ.

ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.