ಜಿಲ್ಲೆ

ಸಾಧಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಾವೀನ್ಯತೆ, ತಾರ್ಕಿಕ, ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ ಸಾಧಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಪ್ರತಿ ಕ್ಷೇತ್ರದಲ್ಲಿ ಇಬ್ಬರು ಸಾಧಕರಿಗೆ ನಗದು ಬಹುಮಾನವಾಗಿ ಹತ್ತು ಸಾವಿರ ರೂ. ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುತ್ತಿದೆ. ಅರ್ಹ ಸಾಧಕರು ಸೆ.30ರೊಳಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ಸಂಪರ್ಕಿಸಿ.