ಜಿಲ್ಲೆ

ಮೆಗಾಗ್ಯಾಸ್ ಪೈಪ್‌ಲೈನ್‌ನಲ್ಲಿ ಅಡುಗೆ ಅನಿಲ ಸೋರಿಕೆ; ಬೆಂಕಿ ನಂದಿಸಲು ಪರದಾಡಿದ ಜನರು

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಮನೆಗಳಿಗೆ ಪೈಪ್‌ಲೈನ್ ಮೂಲಕ ಸಂಪರ್ಕ ಕಲ್ಪಿಸಲಾಗಿರುವ ಮೆಗಾಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕುಣಿಗಲ್ ರಸ್ತೆಯ ಎಸ್‌ಎಸ್‌ಐಟಿ ಕಾಲೇಜು ಮುಂಭಾಗ ಜರುಗಿತು.

ಪೈಪ್‌ಲೈನ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದನ್ನು ಕಂಡ ಸ್ಥಳೀಯರು ಭಯಗೊಂಡು ಬೆಂಕಿ ನಂದಿಸಲು ಪರದಾಡಿದರು.