ಜಿಲ್ಲೆ

ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ, ತಿದ್ದುಪಡಿಗೆ ಅವಕಾಶ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ಹೆಸರು ಸೇರ್ಪಡೆ ಹಾಗೂ ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಅವಕಾಶವನ್ನು ಇಂದಿನಿಂದ ಸೆ. 14 ರವರೆಗೆ ಕಲ್ಪಿಸಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.