ತುಮಕೂರು: ಸಾರ್ವಜನಿಕರ ಕುಂದು ಕೊರತೆ ಆಲಿಸಿ, ಸೂಕ್ತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ರೂಪಿಸಿರುವ ಜಿಲ್ಲಾ ಮಟ್ಟದ ಜನತಾದರ್ಶನ ಸೆ.25ರಂದು ನಗರದ ಗಾಜಿನ ಮನೆಯಲ್ಲಿ ನಡೆಯಲಿದೆ.
ಸೋಮವಾರ ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.20ರಿಂದ 22ರ ವರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಕೌಂಟರ್‌ಗಳೊAದಿಗೆ ಹಾಜರಿದ್ದ ಇಲಾಖೆಗೆ ಸಂಬAಧಿಸಿದ ಅರ್ಜಿ ಸ್ವೀಕರಿಸಲಿದ್ದು, ಜನತಾ ದರ್ಶನದಲ್ಲಿ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ.