ಜಿಲ್ಲೆ

ಕಸಾಯಿಖಾನೆಗಳ ಮೇಲೆ ಪೊಲೀಸರ ದಾಳಿ; ಪೊಲೀಸರ ಮೇಲೆ ಮುಗಿಬಿದ್ದ ವ್ಯಾಪಾರಿಗಳು

ತುಮಕೂರು: ನಗರದ ಮರಳೂರು ದಿಣ್ಣೆಯಲ್ಲಿನ ಅಕ್ರಮ ಕಸಾಯಿಖಾನೆಗಳ ಮೇಲೆ ದಿಢೀರ್ ದಾಳಿ ನಡೆಸಿದ ಪೊಲೀಸರು 75ಕೆಜಿ ಗೋ ಮಾಂಸ ವಶಕ್ಕೆ ಪಡೆದರು.

ದಾಳಿ ಸಂದರ್ಭದಲ್ಲಿ ಪೊಲೀಸರು ಹಾಗೂ ಕಸಾಯಿಖಾನೆಯ ಮಾಲೀಕರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ಈ ಸಂದರ್ಭದಲ್ಲಿ ಒಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.