ಜಿಲ್ಲೆ

ಮಧ್ಯರಾತ್ರಿ ದಂಪತಿ ಆತ್ಮಹತ್ಯೆ; ಕಾರಣ ನಿಗೂಢ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಪಾವಗಡದ ರೊಪ್ಪ ಗ್ರಾಮದಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಮನು (26), ಪವಿತ್ರ(24) ಮೃತ ದಂಪತಿ. ಗುರುವಾರ ತಡರಾತ್ರಿ ಮನೆಯ¯್ಲೆÃ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಮೃತ ಮನು ತಾಯಿ ಶುಕ್ರವಾರ ಬೆಳಗ್ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮೃತರಿಗೆ ಎರಡು ವರ್ಷದ ಹೆಣ್ಣು ಮಗುವಿದೆ, ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ