ತುಮಕೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವು ವಿವಿಧ ಸಾಲ-ಸೌಲಭ್ಯ ಕಲ್ಪಿಸಲು ಸವಿತ ಸಮಾಜ ಮತ್ತು ಇದರ ಉಪಜಾತಿಗೆ ಸೇರಿದವರಿಂದ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ನೀಡಲಾಗುವುದು.
ಕರ್ನಾಟಕ ಒನ್, ಜನಸ್ನೇಹಿ ಕೇಂದ್ರ, ನಾಗರೀಕ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಮೂಲಕ ಸೇವಾಸಿಂಧು ಪೋರ್ಟಲ್ ಮೂಲಕ ನ.3ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು ಮೊ.9606066389, ಜಿಲ್ಲಾ ಕಚೇರಿ ದೂ.0816 2005008 ಸಂಪರ್ಕಿಸಿ.