ಜಿಲ್ಲೆ

ಉಪ್ಪಾರರಿಗೆ ಸಾಲ ಸೌಲಭ್ಯ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ(ಹೊಸತು) ಗಂಗಾಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಮತ್ತು ಸಹಾಯಧನದ ಸೌಲಭ್ಯ ಒದಗಿಸಲು ಸೇವಾಸಿಂಧು ಪೋರ್ಟಲ್ ಮೂಲಕ ನ.3ರೊಳಗೆ ಅರ್ಜಿ ಆಹ್ವಾನಿಸಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ uppardevelopment.karnataka.gov.in ನಲ್ಲಿ ಅಥವಾ ತುಮಕೂರಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಿ. ಮಾಹಿತಿಗೆ ನಿಗಮದ ಸಹಾಯವಾಣಿ 7026288888 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.0816-2005008 ಸಂಪರ್ಕಿಸಿ.