ಜಿಲ್ಲೆ

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಮತದಾರರ ಪಟ್ಟಿ ಪ್ರಕಟ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ 2023ರ ಡಿ.31ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ.

ಭಾರತ ಚುನಾವಣಾ ಆಯೋಗ ಆಗ್ನೇಯ ಶಿಕ್ಷಕರ ದ್ವೈ ವಾರ್ಷಿಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿರುವುದರಿಂದ ಮತದಾರರ ಪಟ್ಟಿ ನಿರಂತರ ಪರಿಷ್ಕರಣೆಯಡಿ 2024ರ ಮೇ.16ಕ್ಕೆ ಅಂತಿಮಗೊಳಿಸಿರುವಂತೆ ಮತದಾರರ ಪಟ್ಟಿಯನ್ನು ಪಟ್ಟಿ ಪ್ರಕಟಿಸಲಾಗಿದೆ. ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.