ತುಮಕೂರು: ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಜಿಲ್ಲೆಯಲ್ಲೆಡೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಅಭಾವ ಎದುರಾಗಿದ್ದು ಸರ್ಕಾರದ ನೆರವಿಗೆ ಜನಾಗ್ರಹ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಿಎಂಗೆ ಪತ್ರಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
ಸ್ವಾತಂತ್ರÈ ದಿನಾಚರಣೆಯಂದು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿಯೇ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವುದಾಗಿ ಪರಮೇಶ್ವರ್ ಭರವಸೆ ನೀಡಿದ್ದರು.