ಜಿಲ್ಲೆ

ಸ್ವಾತಂತ್ರ್ಯ ದಿನದಂದೇ ದುರಂತ: ಧ್ವಜಸ್ತಂಭ ನಿಲ್ಲಿಸೋ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಸಾವು

ರಮೇಶ್​ ಕುಮಾರ್​​ ಬಿ ಎಡಮೋಳೆ

ತುಮಕೂರು: ಇಲ್ಲಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಂದೇ ದುರಂತ ಘಟನೆಯೊಂದು ನಡೆದಿದ್ದು, ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟಿದ್ದಾನೆ.

ಶಶಂಕ್ ( 16), ಪವನ್ ( 22), ಚಂದನ್ (16) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗಾಯಗೊಂಡಿದ್ದು, ಚಂದನ್ ಮೃತಪಟ್ಟಿದ್ದಾನೆ. ಗಾಯಗೊಂಡವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಬಾಲಕರು ಆ ಶಾಲೆಯ ವಿದ್ಯಾರ್ಥಿಗಳಲ್ಲ ಎಂದು ತಿಳಿದುಬಂದಿದೆ.