ಜಿಲ್ಲೆ

ಬಸ್‌ನಿಂದ ಇಳಿಯುತ್ತಿದ್ದ ಪ್ರಯಾಣಿಕರ ಮೇಲೆ ಹರಿದ ಲಾರಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಶಿರಾ ತಾಲೂಕು ಕಳ್ಳಂಬೆಳ್ಳ ಬಸ್ ನಿಲ್ದಾಣದಲ್ಲಿ ಬಸ್‌ನಿಂದ ಇಳಿಯುತ್ತಿದ್ದ ಪ್ರಯಾಣಿಕರ ಮೇಲೆ ಲಾರಿಯೊಂದು ನುಗ್ಗಿ ಸ್ಥಳದಲ್ಲಿಯೇ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.


ಶಿರಾ ತಾಲೂಕಿನ ದೊಡ್ಡಅಗ್ರಹಾರದ ಚಂದ್ರಮ್ಮ(45) ಮೃತೆ, ರಂಗಸ್ವಾಮಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಸ್ತೆಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದ ವೇಳೆ ಅಪಘಾತವಾಗಿದೆ.


ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಎಡವಟ್ಟು ಹಾಗೂ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾರುಕತೆ ಅಪಘಾತಕ್ಕೆ ಕಾರಣವಾಗಿದ್ದು ಲಾರಿ ಹಾಗೂ ಬಸ್ ವಿರುದ್ಧ ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.