ಜಿಲ್ಲೆ

ಜೈಲಿನಿಂದ ಬಂದಿರುವ ಡಿಕೆಶಿ ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತಿದ್ದಾರೆ; ಆರ್.ಅಶೋಕ್

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದೀಗ ತಾನೆ ಜೈಲಿನಿಂದ ಹೊರಬಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು.


ನಗರದ ಸಿದ್ಧಗಂಗಾ ಮಠದಲ್ಲಿ ಸೋಮವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ಧದ ಮಾತುಗಳನ್ನು ಕೇಳುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದರು.


ಅಣ್ಣಾ ಹಜಾರೆ ಅಂತಹವರು ಬಂದು ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಕೇಳಬಹುದು ಆದರೆ, ಆದರೆ ಕಾಂಗ್ರೆಸ್ಸಿಗರು 65 ವರ್ಷಗಳ ಕಾಲ ರಾಜ್ಯವನ್ನು ಲೂಟಿ ಮಾಡಿ ಈಗ ಮಾತನಾಡಿದರೆ ಯಾರು ಕೇಳುತ್ತಾರೆ ಎಂದರು.