ತುಮಕೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಶಿವರಾಜ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಇಲಾಖೆಯಲ್ಲಿ ಮಾಸಿಕ ಬಾಡಿಗೆ ಆಧಾರದಲ್ಲಿ ಕಾರು ಓಡಿಸಿದ್ದ ಚಾಲಕ ನರೇಂದ್ರ ಎಂಬುವವರ ಬಾಡಿಗೆ ಬಿಲ್ 34800ರೂ. ನೀಡಲು ಶಿವರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದ್ದು ಬೇಸತ್ತಿದ್ದ ನರೇಂದ್ರ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು.
ಡಿವೈಎಸ್‌ಪಿ ಜಿ.ಮಂಜುನಾಥ್, ಹರೀಶ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.