ತುಮಕೂರು: ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು ಮಂಗಳವಾರ ಚಿಕ್ಕನಾಯಕನಹಳ್ಳಿ, ಶಿರಾ ತಾಲೂಕಿನಲ್ಲಿ ಭರ್ಜರಿ ಮಳೆ ಸುರಿದಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ 5 ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ಅತೀ ಮಳೆಯಿಂದ ತೋಟಗಾರಿಕೆ ಬೆಳೆಗಳನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ.
ಬುಧವಾರ ಚಿಕ್ಕನಾಯಕನಹಳ್ಳಿ 29.8ಮಿಮೀ, ಗುಬ್ಬಿ 12, ಕೊರಟಗೆರೆ 19, ಕುಣಿಗಲ್ 10.1, ಮಧುಗಿರಿ 17.1, ಪಾವಗಡ 20.2, ಶಿರಾ 9.8, ತಿಪಟೂರು 29.4, ತುಮಕೂರು 19.8 ಹಾಗೂ ತುರುವೇಕೆರೆ ತಾಲೂಕಿನಲ್ಲಿ 16ಮಿಮೀ ಮಳೆಯಾಗುವ ಸಾಧ್ಯತೆಯಿದೆ.