ತುಮಕೂರು: ಜಿಲ್ಲೆಗೆ ಮರಣಶಾಸನವಾಗಿರುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ, ದಲಿತ ವಿರೋಧಿ, ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಖಂಡನಾ ರ್ನಿಣಯ ಕೈಗೊಂಡಿತು. ಇದೇ ವೇಳೆ ಸತತ ಮೂರನೇ ಬಾರಿ ಪ್ರಧಾನಿಯಾದ ನರೇಂದ್ರ ಮೋದಿ, ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ, ಕೇಂದ್ರ ಸಚಿವರಾಗಿರುವ ವಿ.ಸೋಮಣ್ಣ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರನ್ನು ಅಭಿನಂದಿಸಿ ಅಭಿನಂದನಾ ರ್ನಿಣಯ ಕೈಗೊಳ್ಳಲಾಯಿತು.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯನ್ನು ಮಾಜಿ ಸಂಸದ ಜಿ.ಎಸ್ ಬಸವರಾಜು ಉದ್ಘಾಟಿಸಿದರು. ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್ಗೌಡ, ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಪೈಪ್ಲೈನ್ ಮೂಲಕ ಅವೈಜ್ಞಾನಿಕವಾಗಿ ಮಾಗಡಿ ತಾಲೂಕಿಗೆ ತೆಗೆದುಕೊಂಡು ಹೋಗುವ, ಜಿಲ್ಲೆಯ ಜನರಿಗೆ ಅನ್ಯಾಯ ಮಾಡುವ ಕಾಂಗ್ರೆಸ್ ಸರ್ಕಾರದ ಕ್ರಮ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ, ದಲಿತ ವಿರೋಧಿ, ಭ್ರಷ್ಟಾಚಾರ, ಅಭಿವೃದ್ಧಿ ಆಡಳಿತದ ವಿರುದ್ಧ ಖಂಡನಾ ರ್ನಿಣಯ ಮಂಡಿಸಿದರು. ಮುಂಡರಾದ ಸಾಗರನಹಳ್ಳಿ ವಿಜಯಕುಮಾರ್ ಹಾಗೂ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಖಂಡನಾ ರ್ನಿಣಯವನ್ನು ಅನುಮೋದನೆ ಮಾಡಿದರು.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಗಳ ಹಗರಣದಲ್ಲಿ ಮುಳುಗಿದೆ. ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾಗಿದ್ದ ಮಹರ್ಷಿ ವಾಲ್ಮೀಕಿ ನಿಗಮದ 187 ಕೊಟಿ ರೂ.,ಗಳನ್ನು ಬೇನಾಮಿ ಖಾತೆಗಳಿಗೆ ವರ್ಗಾವಣೆ ಮಾಡಿ ಬಡವರ ಹಣವನ್ನು ಲೂಟಿ ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸುಮಾರು 5 ಸಾವಿರ ಕೋಟಿ ರೂಗಳ ದೊಡ್ಡ ಹಗರಣ ನಡೆದಿದೆ. ಪರಿಶಿಷ್ಟ ಜಾತಿಯ ಅಭ್ಯುದಯಕ್ಕಾಗಿ ಮೀಸಲಾಗಿದ್ದ ಸುಮಾರು 25 ಸಾವಿರ ಕೊಟಿ ರೂ.,ಗಳನ್ನು ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಬಳಿಸಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಸರ್ಕಾರ, ಭ್ರಷ್ಟಾಚಾರದ ಸರ್ಕಾರ. ಇಂತಹ ಕಾಂಗ್ರೆಸ್ ಸರ್ಕಾರದ ವಿರುದ್ಧ ಖಂಡನಾ ರ್ನಿಣಯವನ್ನು ಕೈಗೊಳ್ಳುವಂತೆ ಸಭೆಯಲ್ಲಿ ಒತ್ತಾಯಿಸಿದರು.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಉಪಾಧಕ್ಷ ಅನಿಲ್ಕುಮಾರ್, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಶಂಕರಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್ಗೌಡ, ಹಾಲೇಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯಹಾಗೂ ಜಿಲ್ಲೆಯ ಬಿಜೆಪಿ ವಿವಿಧ ಮೋರ್ಚಾ, ಮಂಡಲಗಳ ಅದ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮತ್ತಿತರ ಮುಖಂಡರು ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಿಮ್ಮೆಲ್ಲರ ಶ್ರಮ, ಸಹಕಾರ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಬರುವ ಜಿಪಂ, ತಾಪಂ ಚುನಾವನೆಗಳಲ್ಲು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಗೆಲ್ಲಿಸಬೇಕು. ಬಿಜೆಪಿ, ಜೆಡಿಎಸ್ ಎರಡೂ ಪಕ್ಷಗಳ ಕಾರ್ಯಕರ್ತರ ಸಮನ್ವಯತೆ ಸಾಧಿಸಿ ಚುನಾವಣೆ ಗೆಲ್ಲಬೇಕು. ಈ ತಿಂಗಳ 30ರವರೆಗೆ ಮಂಡಲ ಕಾರ್ಯಕಾರಿಣಿಗಳನ್ನು ನಡೆಸಬೇಕು. ಆಗಸ್ಟ್ 15ರಿಂದ 30ರವರೆಗೆ ಬೂತ್ ಚಲೋ ಕಾರ್ಯಕ್ರಮ ನಡೆಯಲಿದೆ. ಎಚ್.ಎಸ್.ರವಿಶಂಕರ್ ಜಿಲ್ಲಾ ಬಿಜೆಪಿ ಅಧ್ಯಕ್ಷ