ಜಿಲ್ಲೆ

ಕೊಬ್ಬರಿ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸುಂತೆ ಕೇಂದ್ರಕ್ಕೆ ಎಸ್‌ಪಿಎಂ ಮನವಿ

ತುಮಕೂರು: ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ತೆಂಗು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿಯಾಗಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಮನವಿ ಸಲ್ಲಿಸಿದ್ದಾರೆ.

ಬುಧವಾರ ದೆಹಲಿಯ ಕೃಷಿ ಭವನದಲ್ಲಿ ಶೋಭಾಕರಂದ್ಲಾಜೆ ಅವರನ್ನು ಭೇಟಿಯಾಗಿರುವ ಎಸ್‌ಪಿಎಂ, ಹೆಚ್ಚಾಗಿ ತೆಂಗು ಬೆಳೆಯುವ ತುಮಕೂರು ಜಿ¯್ಲೆ ಸೇರಿದಂತೆ ರಾಜ್ಯದೆಲ್ಲೆಡೆ ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದು ಕನಿಷ್ಟ ಬೆಂಬಲ ಬೆಲೆಯನ್ನು 15 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಮನವಿ ಆಲಿಸಿದ ಶೋಭಾಕರಂದ್ಲಾಜೆ ಅವರೂ ಕೂಡ ತೆಂಗು ಹಾಗೂ ಅಡಕೆ ಬೆಳೆಗಾರರ ಹಿತರಕ್ಷಣೆಗೆ ಧಾವಿಸುವುದಾಗಿ ಭರವಸೆ ನೀಡಿದ್ದಾರೆ.