ಜಿಲ್ಲೆ

ಇಂಜಿನಿಯರಿಂಗ್ ಪದವೀಧರರಿಗೆ ಉಪನ್ಯಾಸಕ ಹುದ್ದೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಟಿಟಿಸಿ ಮತ್ತು ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಹಯೋಗದಲ್ಲಿ 2022-23ನೇ ಸಾಲಿನ ಆಟೋಮೋಟಿವ್ ಕೌಶಲ ಅಭಿವೃದ್ಧಿ ತರಬೇತಿ ನೀಡಲು ಪೂರ್ಣ ಅವಧಿಯ ಅತಿಥಿ ಉಪನ್ಯಾಸಕರ ಹುದ್ದೆಗೆ ಮ್ಯಾಕ್ಯಾನಿಕಲ್ ಇಂಜಿನಿಯರಿಂಗ್,ಟೂಲ್ ಅಂಡ್ ಡೈ ಮೇಕಿಂಗ್‌ನಲ್ಲಿ ಡಿಪ್ಲೊಮಾ ಉತ್ತೀರ್ಣರಾಗಿರುವವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರದೊಂದಿಗೆ ಅ.7ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಪ್ರಾಚಾರ್ಯ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು. ಮೊ.9448200407, 9739172455, 8660101978 ಸಂಪರ್ಕಿಸಿ.