ತುಮಕೂರು: ಭಾರತ್‌ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ನಡೆಸಿದ ಪೂರ್ವಸಿದ್ಧತಾ ಸಭೆಯಲ್ಲಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ಪುತ್ರ ದುಷ್ಯಂತ್ ಕಾಣಿಸಿಕೊಂಡಿದ್ದು ಪಕ್ಷ ತ್ಯಜಿಸುವ ಸಂದೇಶ ರವಾನಿಸಿದ್ದಾರೆ.
ನಗರದ ಸಿದ್ಧಾರ್ಥ ಕಾಲೇಜಿನಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇವರಿಬ್ಬರು ಕಾಣಿಸಿಕೊಂಡು ಪಾದಯಾತ್ರೆಗೆ ಜನರನ್ನು ಗುಬ್ಬಿ ಕ್ಷೇತ್ರದಿಂದ ಕರೆತರುವ ಬಗ್ಗೆ ಸೂಚನೆಗಳನ್ನು ಪಡೆದಿದ್ದು ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.
ಸಂಸದ ಡಿ.ಕೆ.ಸುರೇಶ್ ಕೂಡ ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಪೂರ್ವಸಿದ್ಧತೆ ಪರಿಶೀಲಿಸಿದ್ದು ಈ ಸಂದರ್ಭದಲ್ಲಿಯೂ ಭಾರತಿ ಹಾಗೂ ದುಷ್ಯಂತ್ ಬಹಿರಂಗವಾಗಿಯೇ ಕಾಣಿಸಿಕೊಂಡು ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.