ತುಮಕೂರು: ಕಾರ್ಮಿಕ ಇಲಾಖೆ ಜಿಲ್ಲಾ ಕಚೇರಿಯಲ್ಲಿಯೇ ಕಾರ್ಮಿಕ ನಿರೀಕ್ಷಕ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಕಾರ್ಮಿಕ ನಿರೀಕ್ಷಕ ಕಿರಣಕುಮಾರ್ ಸೋಮವಾರ ಮಧ್ಯಾಹ್ನ ಅಂಗಡಿ ಪರವಾನಗಿ ನವೀಕರಣ ಮಾಡಿಕೊಡಲು ಲಂಚ ಸ್ವೀಕರಿಸುವಾದ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಅಂಗಡಿ ಪರವಾನಗಿ ನವೀಕರಣಕ್ಕೆ ಅರ್ಜಿ ಸಲ್ಲಿಸಿದ್ದ ಒಬ್ಬ ವ್ಯಕ್ತಿಗೆ ಕೆಲಸ ಮಾಡಿಕೊಡದೇ ಸತಾಯಿಸಿದ್ದ ಕಿರಣ್‌ಕುಮಾರ್ 5 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.
ಲೋಕಾಯುಕ್ತ ಡಿವೈಎಸ್‌ಪಿ ಸಿ.ಆರ್.ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿ 5 ಸಾವಿರ ಲಂಚ ಸ್ವೀಕರಿಸುವಾಗ ಬಂಧಿಸಲಾಗಿದೆ.