ಜಿಲ್ಲೆ

ನನ್ನ ನಂತರ ಯಾರು ಎಂದು ಹೇಳುವ ಹಕ್ಕು ನನಗಿಲ್ಲ : ಜಿ.ಎಸ್.ಬಸವರಾಜು

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಫರ್ಧಿಸುವುದಿಲ್ಲ ಹಾಗಾಗಿ. ವಿ.ಸೋಮಣ್ಣ ಅಭ್ಯರ್ಥಿಯಾಗಬಹುದು ಎಂದು ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಮಾತನಾಡಿದ್ದೇನೆ ಎಂದು ಸಂಸದ ಜಿ.ಎಸ್.ಬಸವರಾಜು ಸ್ಪಷ್ಟಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ನಂತರ ಯಾರು ಎಂದು ಹೇಳುವ ಹಕ್ಕು ನನಗಿಲ್ಲ, ಬಿಜೆಪಿ ಹೈಕಮಾಂಡ್ ಇದನ್ನು ನಿರ್ಧರಿಸುತ್ತದೆ. ನಾನು ಮುಂದಿನ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇನೆ ಹೊರತು ಸೋಮಣ್ಣ ಹೆಸರು ಸೂಚಿಸಿಲ್ಲ ಎಂದು ತಿಳಿಸಿದರು.