ಜಿಲ್ಲೆ

ಎಚ್‌ಎಎಲ್ ಲಘು ಹೆಲಿಕಾಪ್ಟರ್ ಫ್ಯಾಕ್ಟರಿ ಉದ್ಘಾಟನೆಗೆ ಪ್ರಧಾನಿ ಮೋದಿ; ರಕ್ಷಣಾ ಇಲಾಖೆ ಉಸ್ತುವಾರಿಯಲ್ಲಿ ಸಕಲ ಸಿದ್ಧತೆ

ತುಮಕೂರು: ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್‌ನಲ್ಲಿ ಎಚ್‌ಎಎಲ್ ಲಘು ಹೆಲಿಕಾಪ್ಟರ್ ಫ್ಯಾಕ್ಟರಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಫೆ.6ರಂದು ಲೋಕಾರ್ಪಣೆಯಾಗಲಿದ್ದು ಸಮಾರಂಭಕ್ಕೆ ರಕ್ಷಣಾ ಇಲಾಖೆ ಸೂಚನೆಗಳಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸುದ್ದಿಗಾರರ ಜತೆ ಮಾತನಾಡಿ, ವೈ.ಎಸ್.ಪಾಟೀಲ, ಹೆಲಿಕಾಪ್ಟರ್ ಘಟಕದ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಲಿದ್ದು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಕೇಂದ್ರ ರಕ್ಷಣಾ ಸಚಿವರು, ಸಹಾಯಕ ರಕ್ಷಣಾ ಸಚಿವರು,. ರಾಜ್ಯ ರಕ್ಷಣಾ ಸಚಿವರು, ರಾಜ್ಯಪಾಲರು, ಸಿಎಂ ಹಾಗೂ ರಾಜ್ಯದ ಸಚಿವರುಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು ಸೇರಿದಂತೆ ಸುಮಾರು 1500ಕ್ಕೂ ಹೆಚ್ಚು ಮಂದಿ ಗಣ್ಯರು ಆಗಮಿಸುವ ಸಾಧ್ಯತೆಯಿದೆ ಎಂದರು.

ಹೆಚ್‌ಎಎಲ್ ಘಟಕದ ಉದ್ಘಾಟನೆ ಬಳಿಕ ಜಲಜೀವನ್ ಮಿಷನ್ ಯೋಜನೆಯ ಮನೆ ಮನೆ ಗಂಗೆ ಕಾರ್ಯಕ್ರಮಕ್ಕೆ ಪ್ರಧಾನಿ ಅವರು ಶಂಕುಸ್ಥಾಪನೆ ಕೂಡ ನೆರವೇರಿಸುವ ಬಗ್ಗೆಯಷ್ಟೇ ಪ್ರಧಾನಿ ಕಚೇರಿಯಿಂದ ಮಾಹಿತಿ ಸಿಕ್ಕಿದೆ ಎಂದರು.